ಸಬ್ ಅರ್ಬನ್ ರೈಲು ಯೋಜನೆ ಜಾಫರ್ ಶರೀಫ್ ದೂರದೃಷ್ಟಿಯ ಫಲ: ರಹ್ಮಾನ್ ಶರೀಫ್

Prasthutha|

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಮೂಹ ಸಾರಿಗೆ ವ್ಯವಸ್ಥೆಯನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಕೇಂದ್ರದ ಮಾಜಿ ರೈಲ್ವೆ ಸಚಿವ ಸಿ.ಕೆ.ಜಾಫರ್ ಶರೀಫ್ 1983 ರಲ್ಲಿ ಪ್ರಸ್ತಾಪಿಸಿದ್ದ ಸಬ್ ಅರ್ಬನ್ ರೈಲು ಯೋಜನೆಯೂ ಇಂದು ಕಾರ್ಯಗತಗೊಳ್ಳುತ್ತಿದೆ ಎಂದು ಬೆಂಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಿ.ಕೆ.ಅಬ್ದುಲ್ ರಹ್ಮಾನ್ ಶರೀಫ್ ತಿಳಿಸಿದ್ದಾರೆ.

- Advertisement -


ರಾಜ್ಯದಲ್ಲಿ ರೈಲ್ವೆ ಸಂಪರ್ಕ ಜಾಲವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಜಾಫರ್ ಶರೀಫ್ ನೀಡಿರುವ ಕೊಡುಗೆಯನ್ನು ಪ್ರತಿಯೊಬ್ಬರೂ ಸ್ಮರಿಸಿಕೊಳ್ಳುತ್ತಾರೆ. ಅಲ್ಲದೆ, ಬೆಂಗಳೂರು ನಗರದಲ್ಲಿ ಲೋಕಲ್ ರೈಲು ಸಂಪರ್ಕ ಯೋಜನೆಯನ್ನು ಆರಂಭಿಸುವಂತೆ ಈ ಹಿಂದೆ ರಾಜ್ಯ ಸರಕಾರಕ್ಕೂ ಪ್ರಸ್ತಾವನೆ ಸಲ್ಲಿಸಿದ್ದರು. ಇದೀಗ, ರಾಜ್ಯ ಸರಕಾರವು ಸಬ್ ಅರ್ಬನ್ ರೈಲು ಯೋಜನೆ ಆರಂಭಿಸುತ್ತಿರುವುದು, ಜಾಫರ್ ಶರೀಫ್ ಅವರ ದೂರದೃಷ್ಟಿಯನ್ನು ಪ್ರತಿಬಿಂಬಿಸುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Join Whatsapp