ಮುಂಬೈ: ಮಹಾರಾಷ್ಟ್ರದ ಮುಂಬೈನ ಕುರ್ಲಾ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತಗೊಂಡಿದೆ. ತಡರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಮಾಹಿತಿ ತಿಳಿದ ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಕುಸಿತದ ಅವಶೇಷಗಳಡಿ ಸಿಲುಕಿದ್ದ 7 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಮತ್ತು 20 ರಿಂದ 25 ಜನರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಘಟನಾ ಸ್ಥಳದಲ್ಲಿ ಅಗ್ನಿಶಾಮಕದಳ ಹಾಗೂ ಎನ್ಡಿಆರ್ಎಫ್ ಸಿಬ್ಬಂದಿಗಳು ಬೀಡುಬಿಟ್ಟಿದ್ದು, ಕಟ್ಟಡ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯ ಕೂಡ ನಡೆಯುತ್ತಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಸಚಿವ ಆದಿತ್ಯ ಠಾಕ್ರೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ ಮತ್ತು ಇದಂತೆಯೇ ಕೆಲವೊಂದು ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದು, ಇವುಗಳನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳುವ ಬಗ್ಗೆ ಠಾಕ್ರೆ ಆದೇಶಿಸಿದ್ದಾರೆ. ಭವಿಷ್ಯದಲ್ಲಿ ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ನೆಲಸಮಗೊಳಿಸಲಾಗುವುದಾಗಿಯೂ ಹೇಳಿಕೆ ನೀಡಿದ್ದಾರೆ