ಕುರ್ಲಾ: ಕಟ್ಟಡ ಕುಸಿತ; ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ, ಮೃತರ ಕುಟುಂಬಕ್ಕೆ ಪರಿಹಾರ

Prasthutha|

ಮುಂಬೈ: ಕುರ್ಲಾದಲ್ಲಿ ಕುಸಿದು ಬಿದ್ದ ಕಟ್ಟಡದ ಅವಶೇಷಗಳಡಿಯಿಂದ ಮತ್ತೆರಡು ಶವಗಳನ್ನು ಹೊರತೆಗೆಯಲಾಗಿದ್ದು, ಸಾವಿನ ಸಂಖ್ಯೆ ಮೂರಕ್ಕೆ ಏರಿದೆ ಎಂದು ಬಿಎಂಸಿ ಅಧಿಕಾರಿಗಳು ದೃಢಪಡಿಸಿದ್ದಾರೆ.

- Advertisement -

ರಕ್ಷಣಾ ಕಾರ್ಯಾಚರಣೆ ಮೂಲಕ ಒಟ್ಟು12 ಜನರನ್ನು ರಕ್ಷಿಸಲಾಗಿದೆ.ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಧನ, ಮತ್ತು ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಮಹಾರಾಷ್ಟ್ರ ಸಚಿವ ಸುಭಾಷ್ ದೇಸಾಯಿ ತಿಳಿಸಿದ್ದಾರೆ.

ಮಹಾರಾಷ್ಟ್ರದ ಮುಂಬೈನ ಕುರ್ಲಾ ಪ್ರದೇಶದಲ್ಲಿ  ಶಿಥಿಲಾವಸ್ಥೆಯಲ್ಲಿದ್ದ ನಾಲ್ಕು ಅಂತಸ್ತಿನ ಕಟ್ಟಡ ತಡರಾತ್ರಿ ಕುಸಿತ ಗೊಂಡಿದ್ದು, ಮಾಹಿತಿ ತಿಳಿದ ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಕಟ್ಟಡದ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯ ಕೂಡ ನಡೆಯುತ್ತಿದ್ದು, ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.



Join Whatsapp