ಪ್ರತ್ಯೇಕ ರಾಜ್ಯ ನನ್ನ ವೈಯಕ್ತಿಕ ಅಭಿಪ್ರಾಯವಷ್ಟೆ: ಯೂಟರ್ನ್ ಹೊಡೆದ ಸಚಿವ ಕತ್ತಿ

Prasthutha|

ಕಲಬುರಗಿ: ಉತ್ತರ ಕರ್ನಾಟಕವು 2024ರ ಚುನಾವಣೆಯ ನಂತರ ಬೇರೆ ರಾಜ್ಯವಾಗಬಹುದು ಎಂದು ಹೇಳಿದ್ದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿ ಯೂಟರ್ನ್ ಹೊಡೆದಿದ್ದಾರೆ. ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾದ ಬಳಿಕ ಸಚಿವ ಕತ್ತಿ ತನ್ನ ಹೇಳಿಕೆಗೆ ಸ್ಪಷ್ಟನೆ ನೀಡಿದ್ದು, ಉತ್ತರ ಕರ್ನಾಟಕವು ಪ್ರತ್ಯೇಕ ರಾಜ್ಯವಾಗುತ್ತದೆ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿದ್ದಾರೆ.

- Advertisement -

ರಾಜ್ಯದಲ್ಲಿ ಗಲಾಟೆ, ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ಹೇಳಿಕೆಯನ್ನು ನೀಡಿಲ್ಲ. ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ವಿಚಾರ ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಅವರು ಹೇಳಿದ್ದಾರೆ. ಉತ್ತರ ಕರ್ನಾಟಕ ರಾಜ್ಯದ ಬೇಡಿಕೆ ಇದೆ ಎಂದು ಹೇಳಿದ್ದನ್ನು ಮಾಧ್ಯಮಗಳು ತಿರುಚಿ ಪ್ರಸಾರ ಮಾಡಿದೆ ಎಂದೂ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗಿದೆ. ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ. ಈ ಅಂಶಗಳೆಲ್ಲವೂ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲು ಕಾರಣವಾಗಲಿದೆ ಎಂದು ಸಚಿವ ಉಮೇಶ್ ಕತ್ತಿ ಈ ಹಿಂದೆ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದರು.



Join Whatsapp