ರಾಜಸ್ಥಾನದಲ್ಲಿ ಟೈಲರ್ ಹತ್ಯೆ ಪ್ರಕರಣ: ಇಬ್ಬರ ಬಂಧನ

Prasthutha|

ಉದಯಪುರ: ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಓರ್ವನಿಗೆ ಚಾಕುವಿನಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಟೈಲರ್ ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಟೈಲರ್ ಕನ್ಹಯ್ಯಾ ಲಾಲ್ ಎಂಬಾತನ ಹತ್ಯೆ ನಡೆಸಿದ್ದರು.

- Advertisement -

ಟೈಲರ್ ಹತ್ಯೆ ಮಾಡುವುದನ್ನು ವೀಡಿಯೋ ಮಾಡಿ ಹರಿಯಬಿಟ್ಟು, ನಾವೇ ಹತ್ಯೆ ಮಾಡಿರುವುದಾಗಿ ವೀಡಿಯೋದಲ್ಲಿ ಇಬ್ಬರು ಯುವಕರು ಹೇಳಿದ್ದರು. ಹತ್ಯೆಗೊಳಗಾದ ಕನ್ನಯ್ಯಲಾಲ್ ಈ ಹಿಂದೆ ಪ್ರವಾದಿಯವರನ್ನು ಅವಹೇಳನ ಮಾಡಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾ ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಎನ್ನಲಾಗಿದ್ದು, ಇದಕ್ಕಾಗಿ ಟೈಲರ್ ಅನ್ನು ಹತ್ಯೆಗೈಯ್ಯಲಾಗಿದೆ ಎಂಬ ಆರೋಪವೂ ಕೇಳಿ ಬಂದಿದೆ.



Join Whatsapp