ಜೈಪುರ: ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಹತ್ಯೆಯನ್ನು ಎಐಎಂಐಎಂ ಪಕ್ಷ ಮುಖ್ಯಸ್ಥ, ಹೈದರಾಬಾದ್ ಸಂಸದ ಅಸದುದ್ದೀನ್ ಉವೈಸಿ ಖಂಡಿಸಿದ್ದಾರೆ.
ಉದಯಪುರದಲ್ಲಿ ನಡೆದ ಭೀಕರ ಹತ್ಯೆಯನ್ನು ನಾನು ಖಂಡಿಸುತ್ತೇನೆ. ಕೊಲೆಯನ್ನು ಯಾರೂ ಸಮರ್ಥಿಸಲು ಸಾಧ್ಯವಿಲ್ಲ. ಕಾನೂನನ್ನು ಕೈಗೆ ತೆಗೆದುಕೊಳ್ಳುವ ಹಕ್ಕು ಯಾರಿಗೂ ಇಲ್ಲ. ನಾವು ಯಾವಾಗಲೂ ಹಿಂಸೆಯನ್ನು ವಿರೋಧಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.
ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಉವೈಸಿ ಆಗ್ರಹಿಸಿದ್ದಾರೆ. ಕಾನೂನಿನ ನಿಯಮವನ್ನು ಎತ್ತಿಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ.