ತಂದೆಯ ಗನ್ ನಿಂದ ತಂಗಿಯನ್ನು ಹತ್ಯೆಗೈದ 8ರ ಬಾಲಕ!

Prasthutha|

ವಾಷಿಂಗ್ಟನ್: ಎಂಟು ವರ್ಷದ ಬಾಲಕನೊಬ್ಬ ತನ್ನ ತಂದೆಯ ಗನ್ ನಲ್ಲಿ ಆಟವಾಡುತ್ತಿದ್ದಾಗ ತಂಗಿಗೆ ಗುಂಡು ಹಾರಿಸಿ ಹತ್ಯೆಗೈದ ಘಟನೆ ಅಮೆರಿಕದ ಫ್ಲೋರಿಡಾದಲ್ಲಿ ನಡೆದಿದೆ.

- Advertisement -

ಘಟನೆಗೆ ಸಂಬಂಧಿಸಿದಂತೆ ಬಾಲಕನ ತಂದೆ ರೋಡ್ರಿಕ್ ರಾಂಡಾಲನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಿರ್ಲಕ್ಷ್ಯ ಹಾಗೂ ಸಾಕ್ಷ್ಯ ಮರೆಮಾಚುವ ಆರೋಪದ ಮೇರೆಗೆ ಅವರನ್ನು ಬಂಧಿಸಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ರೋಡ್ರಿಕ್ ತನ್ನಲ್ಲಿದ್ದ ಗನ್ ಅನ್ನು ಮನೆಯಲ್ಲೇ ಬಚ್ಚಿಟ್ಟಿದ್ದನು. ಇದನ್ನು ನೋಡಿದ್ದ 8 ವರ್ಷದ ಬಾಲಕ ತನ್ನ ತಾಯಿ ಮಲಗಿದ್ದ ಸಂದರ್ಭದಲ್ಲಿ ಅದನ್ನು ಹೊರತೆಗೆದು ಆಟವಾಡಲು ಪ್ರಾರಂಭಿಸಿದ್ದಾನೆ. ಆ ಸಂದರ್ಭದಲ್ಲಿ ಅಲ್ಲೇ ಇದ್ದ ತನ್ನ 2 ವರ್ಷದ ತಂಗಿಯ ಮೇಲೆ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ.

- Advertisement -

ಇದರಿಂದ ಗಂಭೀರ ಗಾಯಗೊಂಡ ಮಗುವನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾದರೂ ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವನ್ನಪ್ಪಿದೆ



Join Whatsapp