ಮಂಗಳೂರು: ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಖ್ಯಾತ ಪತ್ರಕರ್ತ ಮುಹಮ್ಮದ್ ಝುಬೈರ್, ಮಾಜಿ ಹಿರಿಯ ಪೊಲೀಸ್ ಅಧಿಕಾರಿ ಆರ್ ಬಿ ಶ್ರೀಕುಮಾರ್ ರವರನ್ನು ಅನ್ಯಾಯವಾಗಿ ಬಂಧಿಸಿದ ಬಿಜೆಪಿ ಸರಕಾರದ ಅಕ್ರಮ ಹಾಗೂ ದಬ್ಬಾಳಿಕೆಯ ನೀತಿಯ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಬುಧವಾರ(ಇಂದು) ಸಂಜೆ 4:30ಕ್ಕೆ ಮಂಗಳೂರಿನ ಕ್ಲಾಕ್ ಟವರ್ ಸಮೀಪ ಪ್ರತಿಭಟನೆ ನಡೆಯಲಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ಪ್ರಗತಿಪರ ಚಿಂತಕರು, ಹೋರಾಟಗಾರರು , ಮತ್ತು ಪಕ್ಷದ ರಾಷ್ಟ್ರೀಯ, ರಾಜ್ಯ, ಜಿಲ್ಲಾ ನಾಯಕರು ಭಾಗವಹಿಸಲಿದ್ದು, ಸಂವಿಧಾನ ಪ್ರೇಮಿಗಳಾದ ಎಲ್ಲಾ ಸಹ್ರದಯಿ ನಾಗರಿಕರು ಸರಕಾರದ ದಮನಕಾರಿ ನೀತಿಯ ವಿರುದ್ಧ ನಡೆಯುವ ಈ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಾದಾತ್ ವಿನಂತಿಸಿದ್ದಾರೆ.