ಜೈಪುರ: ಉದಯಪುರದಲ್ಲಿ ನಡೆದಿರುವ ಟೈಲರ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಉಗ್ರ ಸಂಘಟನೆಯ ನಂಟು ಇರುವುದು ದೃಢಪಟ್ಟಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋಟ್ ಹೇಳಿದ್ದಾರೆ.
ಮಾಜಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿಕೊಂಡಿದ್ದರು ಎಂಬ ಕಾರಣಕ್ಕೆ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಎಂಬುವವರನ್ನು ಇಬ್ಬರು ದುಷ್ಕರ್ಮಿಗಳು ಮಂಗಳವಾರ ಕತ್ತು ಸೀಳಿ ಹತ್ಯೆ ಮಾಡಿದ್ದರು.