ಉಪ ರಾಷ್ಟ್ರಪತಿ ಚುನಾವಣೆಗೆ ವೇಳಾಪಟ್ಟಿ ಪ್ರಕಟ: ಆಗಸ್ಟ್ 6ರಂದು ಮತದಾನ

Prasthutha|

ನವದೆಹಲಿ: 16ನೇ ಉಪ ರಾಷ್ಟ್ರಪತಿ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಆಗಸ್ಟ್ 6ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

- Advertisement -

ಜುಲೈ 5ರಂದು ಮತದಾನಕ್ಕೆ ಅಧಿಸೂಚನೆ ಹೊರಬೀಳಲಿದೆ. ಜುಲೈ 19 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನಾಮಪತ್ರದ ಪರಿಶೀಲನೆ ಜುಲೈ 20ರಂದು ನಡೆಯಲಿದೆ. ಜು 22 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಮತದಾನ ಅಗತ್ಯವಿದ್ದರೆ ಆಗಸ್ಟ್ 6ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಗಳ ವರೆಗೆ ಮತದಾನ ನಡೆಯಲಿದ್ದು, ಅದೇ ದಿನ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.



Join Whatsapp