ಬಿಹಾರ: ಬಿಹಾರದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಸಿಡಿಲು ಬಡಿದು ಒಂದೇ ದಿನ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ನಾಲ್ಕು, ಭೋಜ್ ಪುರ ಜಿಲ್ಲೆಯಲ್ಲಿ ಮೂರು, ಸರನ್ ಜಿಲ್ಲೆಯಲ್ಲಿ ಮೂರು, ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ಎರಡು, ಅರಾರಿಯಾ ಜಿಲ್ಲೆಯಲ್ಲಿ ಇಬ್ಬರು, ಬಂಕಾ ಮತ್ತು ಮುಜಾಫರ್ ಪುರ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಸಿಎಂ ನಿತೀಶ್ ಕುಮಾರ್ ಸಂತಾಪ ಸೂಚಿಸಿದ್ದು, 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಭಾರೀ ಮಳೆ: ಸಿಡಿಲು ಬಡಿದು ಒಂದೇ ದಿನ 16 ಮಂದಿ ಸಾವು
Prasthutha|