ಸಾಲುಮರದ ತಿಮ್ಮಕ್ಕಗೆ ಪರಿಸರ ರಾಯಭಾರಿ ಗೌರವ ಜೊತೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ: ಸಿಎಂ ಬೊಮ್ಮಾಯಿ

Prasthutha|

ಬೆಂಗಳೂರು: ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕಗೆ ಪರಿಸರ ರಾಯಭಾರಿ ಗೌರವ ನೀಡುವ ಜೊತೆಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಾಲುಮರದ ತಿಮ್ಮಕ್ಕನವರ 111ರ ಜನ್ಮದಿನದ ಅಂಗವಾಗಿ ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಗುರುವಾರ ನಡೆದ ಸಾಲುಮರದ ತಿಮ್ಮಕ್ಕ ಗ್ರೀನರಿ ಅವಾರ್ಡ್ ಪ್ರದಾನ ಸಮಾರಂಭದಲ್ಲಿ ಬೊಮ್ಮಾಯಿ ಸ್ಥಾನಮಾನವನ್ನು ಪ್ರಕಟಿಸಿದರು.

- Advertisement -

ಈ ಸ್ಥಾನಮಾನವನ್ನು ರಾಜ್ಯದ ಉದ್ದಕ್ಕೂ ಪರಿಸರ ರಕ್ಷಣೆಯ ಪ್ರಚಾರ ಮಾಡುವ  ನಿಟ್ಟಿನಲ್ಲಿ ನೀಡಲಾಗಿದೆ, ಇವರ ಹೊರ ರಾಜ್ಯದ ಖರ್ಚನ್ನು ಸರಕಾರವೇ ಭರಿಸಲಿದೆ. ಸಾಲುಮರದ ತಿಮ್ಮಕ್ಕ ಅವರ ವೆಬ್ ಸೀರಿಸ್ ಅನ್ನು ವಾರ್ತಾ ಇಲಾಖೆಯಿಂದ ಮೂಲಕ ರಚಿಸಲಾಗುವುದು ಎಂದರು.

ಅಲ್ಲದೇ ತಿಮ್ಮಕ್ಕ ಅವರಿಗೆ ಬೇಲೂರು ತಾಲೂಕಿನಲ್ಲಿ ಹತ್ತು ಎಕರೆ ಭೂಮಿಯನ್ನು ಮಂಜೂರು ಮಾಡಲಾಗುವುದು. ಈಗಾಗಲೇ ಬೆಂಗಳೂರಿನಲ್ಲಿ ನೀಡಲಾಗಿರುವ ಬಿಡಿಎ ನಿವೇಶನದಲ್ಲಿ ಮನೆಯನ್ನು ನಿರ್ಮಿಸಿ ಕೊಡಲಾಗುವುದು ಎಂದು ಹೇಳಿದರು.



Join Whatsapp