ದ.ಕ ಜಿಲ್ಲಾದ್ಯಂತ ಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Prasthutha|


ಮಂಗಳೂರು: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ನಾಳೆ (ಶುಕ್ರವಾರ) ಕೂಡ ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ.

- Advertisement -

ನಾಳೆ ಬೆಳಿಗ್ಗೆ 8.30 ರವರೆಗೆ ಆರೆಂಜ್ ಅಲರ್ಟ್ ಘೋಷಿಸಿರುವುದರಿಂದ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಶುಕ್ರವಾರ ಕೂಡ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಜಿಲ್ಲಾಧಿಕಾರಿ ಕೆ ವೈ ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಕರಾವಳಿಯಲ್ಲಿ ನಿನ್ನೆಯಿಂದ ಮಳೆ ಭಾರಿ ಮಳೆ ಸುರಿಯುತ್ತಿದ್ದು, ಗುರುವಾರವು ಎಡೆಬಿಡದೆ ಸುರಿಯುತ್ತಿದೆ. ಮಳೆ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.



Join Whatsapp