► ಡಿಸಿಎಂ ಸ್ಥಾನ ವಹಿಸಿಕೊಳ್ಳಿ : ಫಡ್ನವೀಸ್ ಗೆ ಬಿಜೆಪಿ ಹೈಕಮಾಂಡ್ ನಿರ್ದೇಶನ
ಮುಂಬೈ : ಮಹಾರಾಷ್ಟ್ರ ರಾಜಕೀಯ ತಿರುವಿನ ಮೇಲೆ ತಿರುವು ಪಡೆದುಕೊಳ್ಳುತ್ತಿದ್ದು, ಶಿವಸೇನೆಯ ಬಂಡಾಯ ಗುಂಪಿಗೆ ಬಾಹ್ಯ ಬೆಂಬಲ ಮಾತ್ರ ನೀಡಿದ್ದ ಬಿಜೆಪಿ ತನ್ನ ನಿಲುವನ್ನು ಬದಲಾಯಿಸಿದೆ.
ಬಿಜೆಪಿ ಕೂಡಾ ಶಿಂಧೆ ಸರಕಾರದ ಭಾಗವಾಗಲಿದೆ. ಬಿಜೆಪಿ ನಾಯಕ, ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ನೂತನ ಉಪಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ.
ಸಂಜೆ ರಾಜಭವನದಲ್ಲಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದ ಬಳಿಕ ಮಾತನಾಡಿದ್ದ ಫಡ್ನವೀಸ್, ನಾನು ಸರ್ಕಾರದ ಭಾಗವಾಗಲ್ಲ, ಶಿಂಧೆ ಸರ್ಕಾರಕ್ಕೆ ಬಿಜೆಪಿ ಬೆಂಬಲ ನೀಡಲಿದೆ ಎಂದು ಹೇಳಿದ್ದರು. ಅದರ ಬೆನ್ನಲ್ಲೇ ಸರ್ಕಾರದ ಭಾಗವಾಗುವಂತೆ ಫಡ್ನವೀಸ್ ಅವರಿಗೆ ಬಿಜೆಪಿ ಹೈಕಮಾಂಡ್ ನಿರ್ದೇಶನ ಕೊಟ್ಟಿದೆ.
ನೂತನ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ವಹಿಸಿಕೊಳ್ಳುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರು ಫಡ್ನವೀಸ್ ಅವರಿಗೆ ಮನವಿ ಮಾಡಿದ್ದಾರೆ.
ನೂತನ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ವಹಿಸಿಕೊಳ್ಳುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರು ಫಡ್ನವೀಸ್ ಅವರಿಗೆ ಮನವಿ ಮಾಡಿದ್ದಾರೆ.
ನೂತನ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ವಹಿಸಿಕೊಳ್ಳುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರು ಫಡ್ನವೀಸ್ ಅವರಿಗೆ ಮನವಿ ಮಾಡಿದ್ದಾರೆ. ಜೆ.ಪಿ.ನಡ್ಡಾ ಅವರ ಮನವಿ ಬೆನ್ನಲ್ಲೇ ದೇವೇಂದ್ರ ಫಡ್ನವೀಸ್ ನೂತನ ಉಪಮುಖ್ಯಮಂತ್ರಿಯಾಗಲು ಒಪ್ಪಿಕೊಂಡಿದ್ದಾರೆ