ಪುತ್ತೂರು | ಪೂಜೆಯ ನೆಪದಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಪ್ರಕರಣ ದಾಖಲು

Prasthutha|

ಪುತ್ತೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಯುವಕನೋರ್ವನ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.

- Advertisement -

ಅರಿಯಡ್ಕ ನಿವಾಸಿ ಸಂದೀಪ್ (22) ವಿರುದ್ಧ ಪ್ರಕರಣ ದಾಖಲಾಗಿದೆ.

ಅಪ್ರಾಪ್ತ ಬಾಲಕಿಗೆ ಸಂದೀಪ್ ದೂರದ ಸಂಬಂಧಿಯಾಗಿದ್ದು, ಅವರಿಬ್ಬರು ಕೆಲ ಸಮಯದಿಂದ ದೂರವಾಣಿ ಮೂಲಕ ಮಾತನಾಡುತ್ತಿದ್ದರು. ಕೆಲ ದಿನಗಳ ಹಿಂದೆ ಬಾಲಕಿಯ ದೊಡ್ಡಪ್ಪನ ಮನೆಯಲ್ಲಿ ಪೂಜೆಗೆ ಸಂದೀಪ ಹೋಗಿದ್ದು, ರಾತ್ರಿ ವೇಳೆ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ನಂತರ ಬೆದರಿಕೆ ಹಾಕಿದ್ದನೆಂದು ದೂರಿನಲ್ಲಿ ತಿಳಿಸಲಾಗಿದೆ.
ಸಂದೀಪ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp