ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಪ್ರತಿಭಟನೆ: ವಿಹಿಂಪ ಕಾರ್ಯಕರ್ತರ ಪ್ಯಾಂಟ್’ಗೆ ಬೆಂಕಿ

Prasthutha|

ಹಾವೇರಿ: ಉದಯಪುರದಲ್ಲಿ ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ವಿಶ್ವಹಿಂದೂ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸುವ ವೇಳೆ ಮೂವರ ಪ್ಯಾಂಟ್ ಗೆ ಬೆಂಕಿ ಕಿಡಿ ತಗುಲಿದ ಘಟನೆ ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ನಡೆದಿದ್ದು, ಸಣ್ಣಪುಟ್ಟ ಗಾಯಗಳಾಗಿವೆ.

- Advertisement -

ಉದಯಪುರದಲ್ಲಿ ನಡೆದಿದ್ದ ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಹಾವೇರಿಯಲ್ಲಿ ವಿಶ್ವಹಿಂದೂ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಟೈರ್ ಸುಡಲು ಅವಕಾಶ ನೀಡದ್ದಕ್ಕೆ ಪೊಲೀಸರ ಜೊತೆ ಕಾರ್ಯಕರ್ತರು ವಾಗ್ವಾದ ನಡೆಸಿದರು. ಕಾರ್ಯಕರ್ತರು ತಂದಿಟ್ಟ ಟೈರ್ ಗಳನ್ನು ಪೊಲೀಸರು ವಾಪಸು ಕಳಿಸಿದರು. ಪೊಲೀಸರ ವಿರೋಧದ ನಡುವೆಯೂ ಟೈರ್ ಗೆ ಬೆಂಕಿ ಹಚ್ಚಿದ ನಂತರ ಮೂವರು ಕಾರ್ಯಕರ್ತರ ಪ್ಯಾಂಟಿಗೆ ಬೆಂಕಿಯ ಕಿಡಿ ಹತ್ತಿಕೊಂಡಿದೆ. ಆದರೆ ತಕ್ಷಣ ಬೆಂಕಿ ನಂದಿಸಲಾಗಿದ್ದು, ಭಾರೀ ಅನಾಹುತ ತಪ್ಪಿದಂತಾಗಿದೆ.



Join Whatsapp