‘ಮಹಾ’ ರಾಜಕೀಯ ಬಿಕ್ಕಟ್ಟು: ಜುಲೈ 4 ರಂದು ವಿಶ್ವಾಸಮತ ಪರೀಕ್ಷೆ ಎದುರಿಸಲಿರುವ ಶಿಂಧೆ ಸರ್ಕಾರ

Prasthutha|

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಏಕನಾಥ್ ಶಿಂಧೆ ಅವರ ನೇತೃತ್ವದಲ್ಲಿ ನಿನ್ನೆ ಸರ್ಕಾರ ರಚನೆಯಾಗಿದ್ದು ಜುಲೈ 4 ರಂದು ಶಿಂಧೆ ಸರ್ಕಾರ ವಿಶ್ವಾಸಮತ ಪರೀಕ್ಷೆಯನ್ನು ಎದುರಿಸಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -

ಈ ಮಧ್ಯೆ ಅಸೆಂಬ್ಲಿ ಸ್ಪೀಕರ್ ಹುದ್ದೆಗೆ ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಸದನದ ವಿಶೇಷ ಎರಡು ದಿವಸಗಳ ಅಧಿವೇಶನವು ಜುಲೈ 3 ರಂದು ಪ್ರಾರಂಭವಾಗಲಿದ್ದು, ಅಗತ್ಯವಿದ್ದಲ್ಲಿ ಈ ಸ್ಥಾನಕ್ಕೆ ಚುನಾವಣೆ ನಡೆಸಲಾಗುವುದೆಂದು ಅವರು ತಿಳಿಸಿದ್ದಾರೆ. ಕಳೆದ ವರ್ಷ ಫೆಬ್ರವರಿಯಲ್ಲಿ ಕಾಂಗ್ರೆಸ್ ಪಕ್ಷದ ನಾನಾ ಪಟೋಲೆ ಅವರು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಈ ಸ್ಥಾನ ಖಾಲಿಯಾಗಿದೆ.

ಮುಖ್ಯಮಂತ್ರಿ ಏಕನಾಥ್ ಶಿಂಧೆ, ಜುಲೈ 4 ರಂದು ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ವಿಶ್ವಾಸ ಮತಯಾಚನೆಯನ್ನು ಮಂಡಿಸಲಿದ್ದಾರೆಂದು ಮತ್ತೊಬ್ಬ ಹಿರಿಯ ಅಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.



Join Whatsapp