ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆಯ ಬಂಡಾಯ ಶಾಸಕ ಏಕನಾಥ್ ಶಿಂಧೆ ಮುಖ್ಯಮಂತ್ರಿಯಾದ ಬಳಿಕ, ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ಎನ್ ಸಿ ಪಿ ನಾಯಕ ಅಜಿತ್ ಪವಾರ್ ಆಯ್ಕೆಯಾಗಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಅಜಿತ್ ಪವಾರ್ ಅವರು ವಿರೋಧ ಪಕ್ಷದ ನಾಯಕರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಸ್ಪೀಕರ್ ರಾಹುಲ್ ನಾರ್ವೇಕರ್ ತಿಳಿಸಿದ್ದಾರೆ.
ಎನ್‌ಸಿಪಿ ನಾಯಕ ಜಯಂತ್ ಪಾಟೀಲ್ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಅಜಿತ್ ಪವಾರ್ ಅವರ ಹೆಸರನ್ನು ಪ್ರಸ್ತಾಪಿಸಿದ್ದರು. ಅಜಿತ್ ಪವಾರ್ ಎನ್‌ಸಿಪಿ ಪಕ್ಷದ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿಯೂ ಆಗಿದ್ದರು.