ಬೆಳ್ತಂಗಡಿ: ಮಲಗಿದ್ದ ಗಂಡನನ್ನು ಬರ್ಬರವಾಗಿ ಹತ್ಯೆ ಮಾಡಿದ ಪತ್ನಿ

Prasthutha|

ಬೆಳ್ತಂಗಡಿ: ಮಲಗಿದ್ದ ಗಂಡನನ್ನು ಪತ್ನಿಯೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳ್ತಂಗಡಿಯ ನಾವೂರು ಗ್ರಾಮದಲ್ಲಿ  ನಡೆದಿದೆ.

- Advertisement -

ಬೇಬಿ (55) ಹತ್ಯೆಯಾದವರು. ಅವರ ಪತ್ನಿ ನಲ್ಲಮ್ಮ (50) ಕೊಲೆ ಮಾಡಿದವರು ಎಂದು ತಿಳಿದುಬಂದಿದೆ.

ಇಂದು ಬೆಳಗ್ಗೆ ಕೊಲೆ ಘಟನೆ ಬೆಳಕಿಗೆ ಬಂದಿದೆ. ಕ್ಷುಲ್ಲಕ ಕಾರಣಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

- Advertisement -

ದಂಪತಿಗೆ ಮೂವರು ಮಕ್ಕಳಿದ್ದು, ಓರ್ವ ಪುತ್ರಿಯನ್ನು ಮದುವೆ ಮಾಡಿಕೊಡಲಾಗಿದೆ.  ಓರ್ವ ಪುತ್ರ ವಿದೇಶದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತೋರ್ವ ಉಪ್ಪಿನಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ .

ನಿನ್ನೆ ಮನೆಯಲ್ಲಿ ಇವರಿಬ್ಬರೇ ಇದ್ದರು. ಯಾವುದೇ ವಿಷಯಕ್ಕೆ ದಂಪತಿ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ನಲ್ಲಮ್ಮ ಅವರು ಕತ್ತಿಯಿಂದ ಮಲಗಿದ್ದ ಪತಿಯನ್ನು ಕಡಿದಿದ್ದಾರೆ. ತೀವ್ರ ರಕ್ತಸ್ರಾವವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಳಗ್ಗೆ ವಿಷಯ ತಿಳಿದ ಸ್ಥಳೀಯರು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಆರೋಪಿ ನಲ್ಲಮ್ಮ ಅವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.



Join Whatsapp