ದೆಹಲಿಯಿಂದ ದುಬೈಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನ ಪಾಕಿಸ್ತಾನದಲ್ಲಿ ತುರ್ತು ಭೂಸ್ಪರ್ಶ

Prasthutha|

ಕರಾಚಿ: ದೆಹಲಿಯಿಂದ ದುಬೈಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನ ತಾಂತ್ರಿಕ ಕಾರಣದಿಂದಾಗಿ ಮಂಗಳವಾರ ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಮೂಲಗಳಿಂದ ತಿಳಿದು ಬಂದಿವೆ.

- Advertisement -

ಸದ್ಯ ಸ್ಪೈಸ್‌ಜೆಟ್ B737 ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಪ್ರಯಾಣಿಕರಿಗೆ ಊಟೋಪಚಾರದ ವ್ಯವಸ್ಥೆ ಮಾಡಲಾಗಿದ್ದು, ಪ್ರಯಾಣಿಕರನ್ನು ದುಬೈಗೆ ಕರೆದೊಯ್ಯುಲು ಬದಲಿ ವಿಮಾನವನ್ನು ಕರಾಚಿಗೆ ಕಳುಹಿಸಲಾಗುತ್ತಿದೆ ಎಂದು ವಕ್ತಾರರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

- Advertisement -

“ಯಾವುದೇ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿಲ್ಲ ಮತ್ತು ವಿಮಾನವು ಸಾಮಾನ್ಯ ಭೂಸ್ಪರ್ಶವನ್ನು ಮಾಡಿದೆ. ವಿಮಾನದಲ್ಲಿ ಈ ಹಿಂದೆ ಯಾವುದೇ ಅಸಮರ್ಪಕ ಕಾರ್ಯನಿರ್ವಹಣೆಯ ಬಗ್ಗೆ ದೂರು ಇರಲಿಲ್ಲ. ಪ್ರಯಾಣಿಕರಿಗೆ ಉಪಹಾರವನ್ನು ನೀಡಲಾಗಿದೆ. ಬದಲಿ ವಿಮಾನವನ್ನು ಕರಾಚಿಗೆ ಕಳುಹಿಸಲಾಗುತ್ತಿದ್ದು, ಅದರಲ್ಲಿ ಪ್ರಯಾಣಿಕರನ್ನು ದುಬೈಗೆ ಕರೆದೊಯ್ಯಲಾಗುತ್ತದೆ” ಎಂದು ವಕ್ತಾರರು ತಿಳಿಸಿದ್ದಾರೆ.

ಇದಕ್ಕೂ ಮೊದಲು ಜೂನ್ 19 ರಂದು 185 ಪ್ರಯಾಣಿಕರೊಂದಿಗೆ ದೆಹಲಿಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನವು ಟೇಕ್-ಆಫ್ ಆದ ತಕ್ಷಣ ವಿಮಾನದ ಎಡ ಇಂಜಿನ್’ಗೆ ಹಕ್ಕಿ ಡಿಕ್ಕಿ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ವಿಮಾನ ಪಾಟ್ನಾದಲ್ಲಿ ತುರ್ತು ಭೂಸ್ಪರ್ಶ ಮಾಡಿತು.



Join Whatsapp