ಬೆಂಗಳೂರು: ಎಸಿಬಿ ದಾಳಿ ಒಂದು ನಿರಂತರ ಪ್ರಕ್ರಿಯೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ.ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಉಚ್ಚ ನ್ಯಾಯಾಲಯವು ಎಸಿಬಿ ಬಾಕಿ ಪ್ರಕರಣಗಳನ್ನು ತನಿಖೆ ಮಾಡಬೇಕು ಎಂದು ಸೂಚಿಸಿದ್ದರ ಹಿನ್ನೆಲೆಯಲ್ಲಿ ಸಮಯ, ಸಾಕ್ಷಿ ಆಧಾರ ಸಮೇತವಾಗಿ ಎಸಿಬಿ ಕೆಲಸ ಮಾಡುತ್ತಿದೆ. ಇದು ನಿರಂತರವಾಗಿ ಮಾಡುವ ಕೆಲಸ ಎಂದರು.
ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಮನೆ ಮುಂದೆ ಪ್ರತಿಭಟನೆಯಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕರ್ತವ್ಯ ಮಾಡಲು ಹೋದಾಗ ಅಡಚಣೆ ಮಾಡಿ ಅದಕ್ಕೆ ರಾಜಕೀಯ ಬಣ್ಣ ನೀಡುವುದು ಸರ್ವೇಸಾಮಾನ್ಯ. ಇದು ಕಾಂಗ್ರೆಸ್ ನ ಸ್ಲೋಗನ್. ಅವರು ಪ್ರಕರಣದ ಬಗ್ಗೆ ಮಾತನಾಡದೇ ಬೇರಲ್ಲವನ್ನು ಮಾತನಾಡುತ್ತಾರೆ. ಕರ್ತವ್ಯ ಮಾಡುವ ಅಧಿಕಾರಿಗಳಿಗೆ ಕೆಲಸವನ್ನು ಪೂರ್ತಿ ಮಾಡಲು ಯಾವುದೇ ಅಡಚಣೆಯಾಗುವುದಿಲ್ಲ ಎಂದರು.
ಪರಪ್ಪನ ಅಗ್ರಹಾರ: ಸೂಕ್ತ ಕ್ರಮ ಜರುಗಿಸಲಾಗುವುದು:
ಪರಪ್ಪನ ಅಗ್ರಹಾರದ ಪ್ರಕರಣವನ್ನು ಗಂಭೀರವಾಗಿ ಸರ್ಕಾರ ಪರಿಗಣಿಸಲಾಗಿದೆ. ಅದಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ತರಿಸಿ, ಕ್ರಮ ಕೈಗೊಳ್ಳಲಾಗುವುದು. ಆಗಾಗ್ಗೆ ಈ ರೀತಿಯ ಅವಾಂತರಗಳು ನಡೆಯುತ್ತಿವೆ. ಅಲ್ಲಿ ವ್ಯವಸ್ಥಿತವಾಗಿ ಒಂದು ಗುಂಪು ಈ ರೀತಿಯ ಕೆಲಸ ಮಾಡುತ್ತಿದೆ ಎಂದು ಕಾಣುತ್ತಿದೆ. ಹಿಂದೆ ಕೂಡ ಈ ಬಗ್ಗೆ ವರದಿ ಬಂದಿತ್ತು. ಅವರು ಅಪರಾಧಿಗಳ ಬಗ್ಗೆ ಸ್ನೇಹ, ಭ್ರಷ್ಟಾಚಾರ ಇದೆ ಎನ್ನುವುದು ಮೇಲ್ನೋಟಕ್ಕೆ ತಿಳಿಯುತ್ತಿದೆ. ಇಂದೇ ಈ ಬಗ್ಗೆ ವರದಿ ತರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.