ಹಾಸನ | ಲಾರಿ – ಕಾರು ಡಿಕ್ಕಿ: ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

Prasthutha|

ಹಾಸನ: ಲಾರಿ ಮತ್ತು ಕಾರು ಡಿಕ್ಕಿ ಹೊಡೆದು ,ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬೋರೆಕಾವಲು ಬಳಿ ನಡೆದಿದೆ.

- Advertisement -

ಧನುಷ್ (28), ಬೀರೇಶ್ ( 27) ಮೃತಪಟ್ಟ ಇಬ್ಬರು ಎಂದು ಗುರುತಿಸಲಾಗಿದೆ. ಮೃತಪಟ್ಟ ಇಬ್ಬರು ಹಾಸನ ಜಿಲ್ಲೆಯ ಕಾಟಿಹಳ್ಳಿ ಗ್ರಾಮದವರು ಎಂದು ತಿಳಿದುಬಂದಿದೆ.

ಅರಕಲಗೂಡು ಕಡೆಯಿಂದ ಹಾಸನದ ಕಡೆ ಬರುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Join Whatsapp