ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ SDPI ಆಡಳಿತವಿರುವ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಅಲ್ಲಿನ ಗ್ರಾಮ ಸಮಿತಿಯ ನಾಯಕರೊಂದಿಗೆ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಬುಧವಾರ ಮಂಗಳೂರಿನ ಕಚೇರಿಯಲ್ಲಿ ಸಂವಾದ ನಡೆಸಿದರು.
ತಮ್ಮ ಅವಧಿಯಲ್ಲಿ ಗ್ರಾಮ ಪಂಚಾಯತ್ ಆಡಳಿತ ಕೈಗೊಂಡ ಕೆಲಸ ಕಾರ್ಯಗಳು ಮತ್ತು ಆಡಳಿತ ವ್ಯವಸ್ಥೆಯ ಬಗ್ಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು, ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಜಿಲ್ಲಾ ಸಮಿತಿ ಸದಸ್ಯರಾದ ನವಾಝ್ ಕಟ್ಟೆ ಉಪಸ್ಥಿತರಿದ್ದರು.