ವಿದ್ಯುತ್ ಶಾಕ್ ತಗುಲಿ ಚಿಂತಾಜನಕ ಸ್ಥಿತಿಯಲ್ಲಿ ರಾಷ್ಟ್ರೀಯ ಫುಟ್ಬಾಲ್ ಆಟಗಾರ; ಸಹಾಯಕ್ಕೆ ಮೊರೆ

Prasthutha|

ಮಂಡ್ಯ: ವಿದ್ಯುತ್ ಶಾಕ್ ಹೊಡೆದು ರಾಷ್ಟ್ರೀಯ ಮಟ್ಟದ ಯುವ ಫುಟ್ಬಾಲ್ ಆಟಗಾರನೋರ್ವ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಕಳೆಯುತ್ತಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.
ನಗರದ ಪಿಇಎಸ್ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದ ವಿಶ್ವಾಸ್, ಫುಟ್ಬಾಲ್ ಕ್ರೀಡೆಯಲ್ಲಿ ರಾಜ್ಯ, ರಾಷ್ಟ್ರಮಟ್ಟದಲ್ಲೂ ಮಿಂಚಿದ್ದರು.
ಜುಲೈ 1ರಂದು ತಮ್ಮ ನಿರ್ಮಾಣ ಹಂತದಲ್ಲಿದ್ದ ಮನೆಗೆ ನೀರು ಹಾಕಲು ಮೋಟಾರ್ ಆನ್ ಮಾಡುವ ವೇಳೆ ವಿಶ್ವಾಸ್ ಗೆ ಕರೆಂಟ್ ಶಾಕ್ ಹೊಡೆದಿದೆ. ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಶ್ವಾಸ್ ಚಿಕಿತ್ಸೆ ಪಡೆಯುತ್ತಿದ್ದು, ಯುವ ಆಟಗಾರನ ಸ್ಥಿತಿ ಚಿಂತಾಜನಕವಾಗಿದೆ. ವಿಶ್ವಾಸ್ ದೇಹದ ಶೇ.80ರಷ್ಟು ಭಾಗ ಹಾನಿಗೊಳಗಾಗಿದ್ದು, ಕೋಮಾ ಸ್ಥಿತಿಯಲ್ಲಿದ್ದಾನೆ.

- Advertisement -

ಮಂಡ್ಯ ನಗರದ ಗುತ್ತಲು ಬಡಾವಣೆ ನಿವಾಸಿ, ನರಸಿಂಹಮೂರ್ತಿ ಮತ್ತು ಶ್ಯಾಮಲಾ ದಂಪತಿ, ಆರ್ಥಿಕವಾಗಿ ತೀವ್ರ ಹಿಂದುಳಿದಿರುವವರಾಗಿದ್ದು, ಮಗನಿಗೆ ಚಿಕಿತ್ಸೆ ಕೊಡಿಸಲು ಪರದಾಡುತ್ತಿದ್ದಾರೆ. ಮತ್ತೊಂದೆಡೆ ಸ್ನೇಹಿತನ ಜೀವ ಉಳಿಸಲು ವಿದ್ಯಾರ್ಥಿಗಳು ಜನರಿಂದ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ಹಲವು ಫುಟ್ಬಾಲ್ ಸಂಘಗಳು ಕೂಡ ಆರ್ಥಿನ ನೆರವು ನೀಡುತ್ತಿದ್ದಾರೆ. ಜುಲೈ 1ರಂದು ಸ್ವರ್ಣ ಫುಟ್ಬಾಲ್ ಸಂಸ್ಥೆ ಆಯೋಜಿಸಿದ್ದ ಹೊನಲು ಬೆಳಕಿನ ಏಳು ಮಂದಿ ಆಟಗಾರರ ಫುಟ್ಬಾಲ್ ಪಂದ್ಯಾವಾಳಿಯಲ್ಲಿ ಭಾಗವಹಿಸಬೇಕಿದ್ದ ಪ್ರತಿಭಾವಂತ ಆಟಗಾರ ವಿಶ್ವಾಸ್ ಅದೇ ದಿನ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಗೆ ಒಳಗಾಗಿದ್ದಾರೆ.

ವಿಶ್ವಾಸ್ ಚಿಕಿತ್ಸೆಗೆ ಪ್ರತಿನಿತ್ಯ ಸಾವಿರಾರು ರೂಪಾಯಿಗಳ ಅಗತ್ಯವಿದೆ. ಮಗನ ಚಿಕಿತ್ಸೆಗಾಗಿ ಬಡ ಕುಟುಂಬ ಸಹೃದಯಿ ದಾನಿಗಳ ನೆರವು ಕೋರಿದ್ದಾರೆ. ಸಹಾಯ ಮಾಡಲು ಇಚ್ಚಿಸುವವರು , ಬ್ಯಾಂಕ್ ಖಾತೆ ಸಂಖ್ಯೆ-17202610002717(ಐಎಫ್ಎಸ್ಸಿ ಕೋಡ್-SYNB0001720), ಫೋನ್ ಪೇ ಅಥವಾ ಗೂಗಲ್ ಪೇ ಸಂಖ್ಯೆ – 9900201307 ಕಳುಹಿಸುವಂತೆ ಕೋರಲಾಗಿದೆ.



Join Whatsapp