ಮಂಗಳೂರು: ಇನ್ಮುಂದೆ ಅಕ್ರಮವಾಗಿ ಗೋ ಹತ್ಯೆ ಪ್ರಕರಣವನ್ನು ಮಟ್ಟ ಹಾಕಲು ಆರೋಪಿಗಳ ಆಸ್ತಿ ಮುಟ್ಟುಗೋಲು ದಂಡಾಸ್ತ್ರ ಬಳಸಲಾಗುವುದು ಎಂದು ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಪೊಲೀಸರು ಅಕ್ರಮ ಗೋ ಹತ್ಯೆ, ಗೋವುಗಳ ಕಳವು ಪ್ರಕರಣ ದಾಖಲಿಸಿದ ಕೂಡಲೇ ಕಂದಾಯ ಇಲಾಖೆ ಆರೋಪಿಗಳ ಆಸ್ತಿ ಮುಟ್ಟುಗೋಲಿಗೆ ಬೇಕಾದ ಕ್ರಮ ಕೈಗೊಳ್ಳಬೇಕು ಎಂದು ಡಾ.ಭರತ್ ಶೆಟ್ಟಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಗೋಹತ್ಯೆ ಆರೋಪ ರುಜುವಾತಾದರೆ ಅಂತಹವರ ಆಸ್ತಿ ಮುಟ್ಟುಗೋಲು ದಂಡಾಸ್ತ್ರ ಪ್ರಯೋಗಿಸುವಂತೆ ಪೊಲೀಸ್ ಇಲಾಖೆ ಮತ್ತು ಕಂದಾಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಭರತ್ ಶೆಟ್ಟಿ ಹೇಳಿದ್ದಾರೆ.