“ಕಾಳಿ” ಬಳಿಕ ಶಿವ, ಪಾರ್ವತಿ ವೇಷಧಾರಿಗಳು ಧೂಮಪಾನ ಮಾಡುವ ಫೋಟೊ ಹಂಚಿಕೊಂಡ ಲೀನಾ

Prasthutha|

ಬೆಂಗಳೂರು: ‘ಕಾಳಿ‘ ಸಾಕ್ಷ್ಯಚಿತ್ರದ ವಿವಾದಿತ ಪೋಸ್ಟರ್ ನಂತರ ನಿರ್ದೇಶಕಿ ಲೀನಾ ಮಣಿಮೇಕಲೈ ಶಿವ, ಪಾರ್ವತಿ ವೇಷಧಾರಿಗಳು ಧೂಮಪಾನ ಮಾಡುತ್ತಿರುವ ಫೋಟೊವನ್ನು ಟ್ವೀಟ್ ಮಾಡಿದ್ದಾರೆ.

- Advertisement -

ಈ ಟ್ವೀಟ್ ಕೂಡ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಅಂಶಗಳನ್ನು ಹೊಂದಿದೆ ಎಂದು ನೆಟ್ಟಿಗರು ಆಕ್ರೋಶ ಹೊರ ಹಾಕಿದ್ದಾರೆ.

ಈ ಹಿಂದೆ ಲೀನಾ ‘ಕಾಳಿ‘ ಎಂಬ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದ ಪೋಸ್ಟರ್ ಹಂಚಿಕೊಂಡಿದ್ದರು. ಅದರಲ್ಲಿ ಹಿಂದೂ ದೇವತೆ ಕಾಳಿ ಮಾತೆಯು ಸಿಗರೇಟ್ ಸೇದುತ್ತಿರುವ ಹಾಗೂ ಕೈಯಲ್ಲಿ ಎಲ್ ಜಿಬಿಟಿಕ್ಯೂ(LGBTQ) ಸಮುದಾಯದ ಧ್ವಜವನ್ನು ಹಿಡಿದಿರುವ ಅವತಾರದಲ್ಲಿ ತೋರಿಸಿದ್ದರು. ಈ ಪೋಸ್ಟರ್ ಹಾಗೂ ಲೀನಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.



Join Whatsapp