ಧರ್ಮಾಧಾರಿತ ರಾಜಕೀಯ ಬಿಜೆಪಿಯ ಬಂಡವಾಳ: ಗೋಪಾಲಕೃಷ್ಣ ಬೇಳೂರು

Prasthutha|

ಸಾಗರ: ಮುಸ್ಲಿಂ ನಾಮಧಾರಿಗಳು ಭಾಗಿಯಾಗಿರುವ ಹತ್ಯೆ ಪ್ರಕರಣಗಳನ್ನು ಮಾತ್ರ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಗಂಭೀರವಾಗಿ ಪರಿಗಣಿಸುವಂತೆ ಕಾಣುತ್ತಿದೆ. ಹುಬ್ಬಳ್ಳಿಯಲ್ಲಿ ನಡೆದಿರುವ ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರ ವಾಗಿ ಪರಿಗಣಿಸದೇ ಇರುವುದು ಇದಕ್ಕೆ ಸಾಕ್ಷಿ  ಎಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದ್ದಾರೆ.

- Advertisement -

ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ  ಅವರು  ‘ರಾಜಸ್ಥಾನದ ಉದಯಪುರದಲ್ಲಿ ನಡೆದ ಕೊಲೆ ಪ್ರಕರಣದ ವಿರುದ್ಧ ಬೀದಿಗಿಳಿದು ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರು, ಚಂದ್ರಶೇಖರ್ ಗುರೂಜಿ ಕೊಲೆ ಪ್ರಕರಣದಲ್ಲಿ ಮಾತ್ರ ಮೌನ ವಹಿಸಿದ್ದಾರೆ. ಈ ಪ್ರಕರಣದ ಆರೋಪಿಗಳು ಒಂದು ವೇಳೆ ಮುಸ್ಲಿಮರಾಗಿದ್ದರೆ ಇಷ್ಟೊತ್ತಿಗೆ ಬಿಜೆಪಿ ಮುಖಂಡರು ಬೊಬ್ಬೆ ಹೊಡೆಯು ತ್ತಿದ್ದರು’ ಎಂದು ಟೀಕಿಸಿದರು.

ಶಿವಮೊಗ್ಗದಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳಿಗೆ ಜೈಲಿನಲ್ಲಿ ರಾಜಾತಿಥ್ಯ ದೊರಕುತ್ತಿರುವ ಸುದ್ದಿ ಬೆಳಕಿಗೆ ಬಂದಿದೆ. ಪ್ರಕರಣದ ರಾಜಕೀಯ ಲಾಭ ಪಡೆಯಲು ಮುಂದಾದ ಬಿಜೆಪಿ ಈಗ ಸತ್ತು ಹೋಗಿದೆ ಎನ್ನುವುದಕ್ಕೆ ಇದಕ್ಕಿಂತ ಸ್ಪಷ್ಟ ಉದಾಹರಣೆ ಬೇರೊಂದಿಲ್ಲ ಎಂದು ಹೇಳಿದರು.

- Advertisement -

ಕೊಲೆಗೆ ಕೊಲೆಯ ಮೂಲಕವೇ ಉತ್ತರ ಕೊಡಬೇಕು ಎಂದು ಬಿಜೆಪಿ ಯ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪ ರುವ ಪ್ರಚೋನಕಾರಿ ಹೇಳಿಕೆ ನೀಡಿದ್ದು, ಇಂತಹ ಹೇಳಿಕೆಗಳಿಂದ ಸಮಾಜದ ಶಾಂತಿ ಕದಡುವುದು ಬಿಜೆಪಿಯ ಮುಖಂಡರಿಗೆ ಅಭ್ಯಾಸವಾಗಿಬಿಟ್ಟಿದೆ. ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ್ದರೂ ಬಿಜೆಪಿಯವರಿಗೆ ಬುದ್ದಿ ಬಂದಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.



Join Whatsapp