ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಹಂಚಿಕೆಗೆ 132 ಕೋಟಿ ರೂ.ಗಳ ಅನುಮೋದನೆ: ಮುಖ್ಯಮಂತ್ರಿ ಬೊಮ್ಮಾಯಿ

Prasthutha|

ಬೆಂಗಳೂರು: ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್  ಹಂಚಿಕೆಗೆ ಹಣ ನೀಡದೆ ನಿರ್ಲಕ್ಷ್ಯ ತೋರಿದ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಶೂ, ಸಾಕ್ಸ್ ಖರೀದಿಸಿ ಹಂಚಿಕೆ ಮಾಡಲು 132 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಿದೆ.

- Advertisement -

ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್  ಹಂಚಿಕೆಗೆ 132 ಕೋಟಿ ರೂ.ಗಳನ್ನು ಒದಗಿಸಿ ಅನುಮೋದನೆ ನೀಡಲಾಗಿದೆ ಎಂದು  ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು

ಅವರು ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

- Advertisement -

 ಸಮವಸ್ತ್ರದ ವಿಚಾರದಲ್ಲಿ ಸರ್ಕಾರ ಈಗಾಗಲೇ ಸಮವಸ್ತ್ರಕ್ಕೆ ಅನುಮೋದನೆ ನೀಡಿದೆ. ಸಮವಸ್ತ್ರ ತಯಾರಾಗಲು ಸ್ವಲ್ಪ ಸಮಯ ಹಿಡಿಯುತ್ತದೆ. ನಂತರ ವಿತರಣೆಯಾಗಲಿದೆ. ಈ ವಿಷಯದಲ್ಲಿ ಯಾವುದೇ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದರು.

ಆಗ ಭಿಕ್ಷೆ ಬೇಡಿರುವ ಹಣ ಎಲ್ಲಿ?

ಕೆಪಿಸಿಸಿ ಅಧ್ಯಕ್ಷ  ಡಿ.ಕೆ.ಶಿವಕುಮಾರ್ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಈ ಹಿಂದೆ ಕೋವಿಡ್ ಸಮಯದಲ್ಲಿ ಭಿಕ್ಷೆ ಬೇಡಿ  ಜನರಿಗೆ ಕೊಡುತ್ತೇವೆ ಎಂದು ಅವರು ಹೇಳಿದ್ದರು. ಆ ಹಣ ಎಲ್ಲಿ ಎಂದು ಕೇಳಿದ ಸಿಎಂ,  ಎಂದಿನಂತೆಯೇ ಇದು ಕೂಡ  ಎಂದು ಮುಖ್ಯಮಂತ್ರಿಗಳು ತಿಳಿಸಿದರು.



Join Whatsapp