2023 ರ ವಿಧಾನಸಭೆ ಚುನಾವಣೆ ನನ್ನ‌ ಕೊನೆಯ ಚುನಾವಣೆ: ಸಿದ್ದರಾಮಯ್ಯ ಘೋಷಣೆ!

Prasthutha|

ಮೈಸೂರು: ಮುಂದಿನ ವರ್ಷದ ವಿಧಾನಸಭಾ ಚುನಾವಣೆ ನನ್ನ ಕೊನೆಯ ಚುನಾವಣೆ. ಆ ಬಳಿಕ ನಾನು ರಾಜಕೀಯದಿಂದ ನಿವೃತ್ತಿ ತೆಗೆದುಕೊಂಡು ಇತರರಿಗೆ ಅವಕಾಶ ಕಲ್ಪಿಸಿಕೊಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಶುಕ್ರವಾರ ಘೋಷಿಸಿದ್ದಾರೆ.

- Advertisement -

ಪಟ್ಟಣದ ಬಸ್ತೀಪುರ ಬಡಾವಣೆಯಲ್ಲಿ ಆಯೋಜಿಸಿದ್ದ ಸಿದ್ದಪ್ಪಾಜಿ ಕಂಡಾಯ ಮತ್ತು ಕೊಂಡೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದಾವಣಗೆರೆಯಲ್ಲಿ ಆಗಸ್ಟ್‌ 3ರಂದು ನಡೆಯುವ ನನ್ನ 75ನೇ ಜನ್ಮ ದಿನೋತ್ಸವಕ್ಕೆ ಆರೆಸ್ಸೆಸ್‌ನವರು ಸಿದ್ದರಾಮಯ್ಯ ಅವರ ಉತ್ಸವ ಎಂದು ನಾಮಕರಣ ಮಾಡಿದ್ದಾರೆ. ಅದು ಉತ್ಸವ ಅಲ್ಲ ಅಮೃತೋತ್ಸವ. ಅದಕ್ಕೆ ಎಲ್ಲರೂ ಬನ್ನಿ ಎಂದು ಆಹ್ವಾನ ನೀಡಿದರು.



Join Whatsapp