ಮುಂದಿನ 5 ವರ್ಷಕ್ಕೆ ಭಾರತದಲ್ಲಿ ಪೆಟ್ರೋಲ್ ನಿಷೇಧ: ನಿತಿನ್ ಗಡ್ಕರಿ

Prasthutha|

ನವದೆಹಲಿ: ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿ ಪೆಟ್ರೋಲ್​ ಬಳಕೆ ನಿಷೇಧಿಸಿ ಪರ್ಯಾಯ ಇಂಧನಗಳತ್ತ ಭಾರತ ಮುಖ ಮಾಡುತ್ತದೆ ಎಂದು
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

- Advertisement -

ಭಾರತಕ್ಕೆ ಬರುವ ವರ್ಷಗಳಲ್ಲಿ ಪೆಟ್ರೋಲ್​ ಬಳಕೆಯ ಅಗತ್ಯತೆ ಇರುವುದಿಲ್ಲ ಎಂದು ಸಮೀಕ್ಷೆ ತಿಳಿಸಿದ್ದು ಇದಕ್ಕೆ ಪುಷ್ಟಿ ನೀಡುವಂತೆ ಕೇಂದ್ರ ಸಚಿವ ನಿತಿನ್​ ಗಡ್ಕರಿ ಕೂಡ ಮುಂದಿನ ಐದು ವರ್ಷಗಳಲ್ಲಿ ಪೆಟ್ರೋಲ್​ ಅನಿವಾರ್ಯತೆ ಇರುವುದಿಲ್ಲ ಎಂದಿದ್ದಾರೆ.

ಮುಂದಿನ ಐದು ವರ್ಷದಲ್ಲಿ ಪೆಟ್ರೋಲ್​ ಖಾಲಿಯಾಗಬಹುದು, ಇದರಿಂದಾಗಿ ಪಳೆಯುಳಿಕೆ ಇಂಧನವನ್ನು ನಿಷೇಧಿಸಲಾಗುವುದು ಎಂದು ಭವಿಷ್ಯ ನುಡಿದಿದ್ದಾರೆ.

- Advertisement -

ಮಹಾರಾಷ್ಟ್ರದ ಅಕೋಲಾದಲ್ಲಿ ಡಾ.ಪಂಜಾಬ್ರಾವ್ ದೇಶಮುಖ್ ಕೃಷಿ ವಿದ್ಯಾಪೀಠದಿಂದ ಗೌರವ ಡಾಕ್ಟರೇಟ್​ ಸ್ವೀಕರಿಸಿ ಮಾತನಾಡಿರುವ ಅವರು, ಮಹಾರಾಷ್ಟ್ರದ ವಿದರ್ಭ ಜಿಲ್ಲೆಯಲ್ಲಿ ತಯಾರಾಗುತ್ತಿರುವ ಜೈವಿಕ ಎಥೆನಾಲ್ ಅನ್ನು ವಾಹನಗಳಲ್ಲಿ ಬಳಸಲಾಗುತ್ತಿದೆ. ಹಸಿರು ಹೈಡ್ರೋಜನ್ (ಹಸಿರು ಜಲಜನಕ) ತಯಾರಿಸಬಹುದು ಮತ್ತು ಇದನ್ನೂ ಕೆಜಿಗೆ 70 ರೂ.ಗೆ ಮಾರಾಟ ಮಾಡಬಹುದು ಎಂದು ಹೇಳಿದ್ದಾರೆ.



Join Whatsapp