ಮುಂಬೈ: ಇತ್ತೀಚೆಗೆ ಕೊಲೆಯಾದ ಉಮೇಶ್ ಕೊಲ್ಹೆ ಅವರ ನಿವಾಸದ ಎದುರು ಸಂಸದೆ ನವನೀತ್ ರಾಣಾ ಮತ್ತು ಪತಿ, ಶಾಸಕ ರವಿ ರಾಣಾ ಎಂಬವರು ಹನುಮಾನ್ ಚಾಲೀಸ ಪಠಿಸಿ ಪ್ರತಿಭಟಿಸಿದ ಘಟನೆ ವರದಿಯಾಗಿದೆ.
ಈ ವೇಳೆ ಪ್ರತಿಕ್ರಿಯಿಸಿದ ಅಮರಾವತಿ ಸಂಸದೆ ನವನೀತ್ ರಾಣೆ, ಕೊಲ್ಹೆ ಹಂತಕರನ್ನು ಸಾರ್ವಜನಿಕವಾಗಿ ನೇಣು ಹಾಕಬೇಕು. ಈ ಮೂಲಕ ದೇಶದಲ್ಲಿ ಅಪರಾಧ ಕೃತ್ಯಗಳು ಮರುಕಳಿಸುವುದನ್ನು ತಡೆಯಬಹುದು ಎಂದು ತಿಳಿಸಿದರು. ಅಲ್ಲದೆ ಈ ಪ್ರಕರಣದಲ್ಲಿ ಮಾದರಿ ಕಾನೂನು ಕ್ರಮ ಜರುಗಿಸಬೇಕೆಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಆಗ್ರಹಿಸಿದ್ದಾರೆ.
ಉಮೇಶ್ ಕೊಲ್ಹೆ ಹತ್ಯೆ ಪ್ರಕರಣವನ್ನು ತನಿಖೆ ನಡೆಸುತ್ತಿರುವ NIA ಎಲ್ಲಾ ಏಳು ಆರೋಪಿಗಳನ್ನು ವಶಕ್ಕೆ ಪಡೆದಿದೆ.