ಮಂಗಳೂರಿನಲ್ಲಿ ಭಾರಿ ಮಳೆ: ಪಿಲಿಕುಳ ಜೈವಿಕ ಉದ್ಯಾನಕ್ಕೆ ನುಗ್ಗಿದ ನೀರು

Prasthutha|

- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಪ್ರವಾಸಿ ತಾಣವಾದ ಪಿಲಿಕುಳ ಮೃಗಾಲಯಕ್ಕೆ ಭಾರಿ ಪ್ರಮಾಣದ ನೀರು ನುಗ್ಗಿದೆ.

ಪಿಲಿಕುಳ ಜೈವಿಕ ಉದ್ಯಾನಕ್ಕೆ ನೀರು ನುಗ್ಗಿದ್ದು, ಪ್ರಾಣಿಗಳ ವಾಸ್ತವ್ಯಕ್ಕೂ ಕಷ್ಟವಾಗಿದೆ.

- Advertisement -

ಇದೇ ಮೊದಲ ಬಾರಿಗೆ ನೀರು ಒಳನುಗ್ಗಿದೆ. ಸದ್ಯ ಪ್ರವಾಸಿಗರಿಗೆ ಪಿಲಿಕುಳ ಮೃಗಾಲಯಕ್ಕೆ ವೀಕ್ಷಣೆಯನ್ನು ನಿರ್ಬಂಧಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಆರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಕಳೆದ ಕೆಲವು ದಿನಗಳಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.



Join Whatsapp