ಚೆನ್ನೈ: ಕೋಮು ದ್ವೇಷ ಪ್ರಚೋದಿಸುವ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಆರೋಪದಲ್ಲಿ ತಮಿಳುನಾಡು ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯೆ ಸೌಧಾ ಮಣಿ ಅವರನ್ನು ಶನಿವಾರ ಕೇಂದ್ರೀಯ ಅಪರಾಧ ವಿಭಾಗದ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ಈ ವರ್ಷದ ಆರಂಭದಲ್ಲಿ ಸೌಧಾ ಮಣಿ ಅವರು ಸಮಾಜದಲ್ಲಿ ಕೋಮು ದ್ವೇಷ ಪ್ರಚೋದಿಸುವ ವೀಡಿಯೋವೊಂದನ್ನು ಶೇರ್ ಮಾಡಿದ್ದರು ಎನ್ನಲಾಗಿದೆ.
ಈ ವರ್ಷದ ಆರಂಭದಲ್ಲಿ, ಮಾಜಿ ಸುದ್ದಿ ನಿರೂಪಕಿಯೂ ಆಗಿರುವ ಸೌಧಾಮಣಿ ಅವರು ಅಪರಿಚಿತ ವ್ಯಕ್ತಿಯ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದರು. ಅತಿಕ್ರಮಣಗಳನ್ನು ತೆರವುಗೊಳಿಸುವ ಬಗ್ಗೆ ಹೈಕೋರ್ಟ್ ಆದೇಶಗಳನ್ನು ಉಲ್ಲೇಖಿಸಿ, ರಾಜ್ಯದಲ್ಲಿ ಕೇವಲ ಹಿಂದೂ ದೇವಾಲಯಗಳನ್ನು ಮಾತ್ರ ತೆಗೆದುಹಾಕಲಾಗುತ್ತಿದೆ ಎಂದು ಆರೋಪಿಸಿರುವ ವ್ಯಕ್ತಿಯ ವೀಡಿಯೊವನ್ನು ಅವರು ರೀಟ್ವೀಟ್ ಮಾಡಿದ್ದರು ಎನ್ನಲಾಗಿದೆ.