ಚೆನ್ನೈ: ತಮಿಳುನಾಡಿನ ಚೆನ್ನೈನಲ್ಲಿ ಸೋಮವಾರ ನಡೆದ ಎಐಎಡಿಎಂಕೆ ಪಕ್ಷದ ಸಾಮಾನ್ಯ ಸಭೆಯಲ್ಲಿ ಪಕ್ಷದ ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ಎಡಪ್ಪಾಡಿ ಪಳನಿಸ್ವಾಮಿ ಆಯ್ಕೆಯಾಗಿದ್ದಾರೆ.
ಎಐಎಡಿಎಂಕೆ ಸಾಮಾನ್ಯ ಮಂಡಳಿ ಸಭೆಗೆ ತಡೆ ನೀಡುವಂತೆ ಮಾಜಿ ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಮಾಡಿದ್ದ ಮನವಿಯನ್ನು ಸೋಮವಾರ ಮದ್ರಾಸ್ ಹೈಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ ಈ ಆಯ್ಕೆಯನ್ನು ಘೋಷಿಸಲಾಗಿದೆ.
ಒಪಿಎಸ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ, ರಾಜಕೀಯ ಪಕ್ಷದ ಜಗಳದಲ್ಲಿ ನ್ಯಾಯಾಲಯವು ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿ ವಜಾಗೊಳಿಸಿತ್ತು. ಇದರೊಂದಿಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಆಯ್ಕೆ ಸುಗಮವಾಗಿ ನಡೆಯಿತು. ಇದರೊಂದಿಗೆ ಎಡಪ್ಪಾಡಿ ಪಳನಿಸ್ವಾಮಿ ಬಣ ಮೇಲುಗೈ ಸಾಧಿಸಿದಂತಾಗಿದೆ.
ಇಂದಿನ ಎಐಎಡಿಎಂಕೆ ಸಾಮಾನ್ಯ ಸಭೆಯಲ್ಲಿ ಪೆರಿಯಾರ್, ಎಂಜಿ ರಾಮಚಂದ್ರನ್ (ಎಂಜಿಆರ್), ಜೆ.ಜಯಲಲಿತಾ ಅವರಿಗೆ ಭಾರತ ರತ್ನ ನೀಡಬೇಕು ಎಂದು ಬೇಡಿಕೆಯ ನಿರ್ಣಯವನ್ನು ಅಂಗೀಕರಿಸಲಾಯಿತು.