ಎಐಎಡಿಎಂಕೆ ಪಕ್ಷದಿಂದ ಪನ್ನೀರ್ ಸೆಲ್ವಂ ಉಚ್ಚಾಟನೆ

Prasthutha|

ಚೆನ್ನೈ: ಮಾಜಿ ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾ ಮಾಡಲು ಎಐಎಡಿಎಂಕೆ ನಿರ್ಣಯ ಕೈಗೊಂಡಿದೆ.

- Advertisement -

ಮಾಜಿ ಮುಖ್ಯಮಂತ್ರಿ ಜೆ.ಲಲಿತಾ ಅವರ ಆಪ್ತರಾಗಿದ್ದ ಪನ್ನೀರ್ ಸೆಲ್ವಂ ಅವರು ಜಯಲಲಿತಾ ಜೈಲಿಗೆ ಹೋದಾಗ ಮೂರ ಬಾರಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು.

ತಮಿಳುನಾಡಿನ ಚೆನ್ನೈನಲ್ಲಿ ಸೋಮವಾರ ನಡೆದ ಎಐಎಡಿಎಂಕೆ ಪಕ್ಷದ ಸಾಮಾನ್ಯ ಸಭೆಯಲ್ಲಿ ಪಕ್ಷದ ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ಎಡಪ್ಪಾಡಿ ಪಳನಿಸ್ವಾಮಿ ಆಯ್ಕೆಯಾದ ಬೆನ್ನಿಗೇ ಈ ನಿರ್ಣಯ ಕೈಗೊಳ್ಳಲಾಗಿದೆ.

- Advertisement -

ಎಐಎಡಿಎಂಕೆ ಸಾಮಾನ್ಯ ಮಂಡಳಿ ಸಭೆಗೆ ತಡೆ ನೀಡುವಂತೆ ಮಾಜಿ ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಮಾಡಿದ್ದ ಮನವಿಯನ್ನು ಸೋಮವಾರ ಮದ್ರಾಸ್ ಹೈಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ ಈ ಸಭೆ ನಡೆದಿತ್ತು.



Join Whatsapp