ಕೊಂಡಂಗೇರಿಯಲ್ಲಿ ನೆರೆ ಭೀತಿ : ಗ್ರಾಮಸ್ಥರ ಸ್ಥಳಾಂತರಕ್ಕೆ ಗ್ರಾ. ಪಂ ಚಿಂತನೆ

Prasthutha|

ಕೊಡಗು: ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅಪಾರ ನಾಶ ನಷ್ಟವುಂಟಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

- Advertisement -

ಹಾಲುಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕೊಂಡಂಗೇರಿ ಭಾಗದ ನದಿ ನೀರಿನಲ್ಲಿ ಭಾರಿ ಏರಿಕೆ ಕಂಡುಬಂದಿದ್ದು, ಪ್ರವಾಹದ ಭೀತಿ ಎದುರಾಗಿದೆ.

ಈ ಹಿನ್ನೆಲೆಯಲ್ಲಿ ಜನರನ್ನು ಬೇರೆಡೆಗೆ ಸ್ಥಳಾಂತರಿಸಲು ಪರ್ಯಾಯ ವ್ಯವಸ್ಥೆ ಮಾಡುವ ಸಲುವಾಗಿ ಕಂದಾಯ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಪಂಚಾಯತಿ ಅಧ್ಯಕ್ಷರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



Join Whatsapp