ನ್ಯಾ.ಸಂದೇಶ್ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ಸೀಮಂತ್ ಕುಮಾರ್; ನಾಳೆ ವಿಚಾರಣೆ

Prasthutha|

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿ ಲಂಚ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸಂದೇಶ್ ತಮ್ಮ ವ್ಯಾಪ್ತಿ ಮೀರಿ ಆದೇಶ ಮಾಡಿದ್ದಾರೆ. ಹಾಗಾಗಿ ಅದಕ್ಕೆ ತಡೆ ನೀಡಬೇಕೆಂದು ಕೋರಿ ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಲ್ಲಿಸಿರುವ ಅರ್ಜಿ ಸುಪ್ರೀಂಕೋರ್ಟ್ ನಲ್ಲಿ ಮಂಗಳವಾರ ವಿಚಾರಣೆಗೆ ಬರಲಿದೆ.

- Advertisement -

ನ್ಯಾ.ಎಚ್.ಪಿ. ಸಂದೇಶ್ ಭ್ರಷ್ಟಾಚಾರ ನಿಗ್ರಹ ದಳದ ವಿರುದ್ಧ ಹಾಗೂ ತಮ್ಮ ವಿರುದ್ಧ ಭಾರಿ ಟೀಕೆ ಮಾಡಿರುವುದನ್ನು ಪ್ರಶ್ನಿಸಿ ನ್ಯಾ. ಸಂದೇಶ್ ವಿರುದ್ಧ ಸಲ್ಲಿಸಿದ್ದ ಮನವಿಯನ್ನು ಕರ್ನಾಟಕ ಹೈಕೋರ್ಟ್ ಇನ್ನೂ ವಿಚಾರಣೆಗೆ ಸ್ವೀಕರಿಸಿಲ್ಲ. ಹಾಗಾಗಿ ಸೀಮಂತ್ ಕುಮಾರ್ ಸಿಂಗ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಆ ಅರ್ಜಿಯ ತುರ್ತು ವಿಚಾರಣೆಗೆ ಸೋಮವಾರ ಬೆಳಗ್ಗೆ ಸಿಜೆಐ ಎನ್.ಎ. ರಮಣ ಅವರಿದ್ದ ನ್ಯಾಯಪೀಠದ ಎದುರು ಮನವಿ ಮಾಡಲಾಯಿತು.

ಆಗ ಸಿಜೆ, ನ್ಯಾಯಮೂರ್ತಿ ತಮಗೆ ವರ್ಗಾವಣೆ ಬೆದರಿಕೆ ಇದೆ ಎಂದು ಹೇಳಿದ್ದಾರಲ್ಲಾ ಇದು ಅದೇ ಪ್ರಕರಣವೇ? ಆ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ ಅಲ್ಲವೇ ಎಂದು ಕೇಳಿದರು. ಆಗ ಅರ್ಜಿದಾರರ ಪರ ವಕೀಲರು, ಹೌದು ಅದೇ ಪ್ರಕರಣ. ಆದರೆ, ಇದರಲ್ಲಿ ಎಸಿಬಿಯ ಪಾತ್ರವೇನೂ ಇಲ್ಲ ಎಂದು ಉತ್ತರಿಸಿದರು. ಅದಕ್ಕೆ ಸಿಜೆ, ಸರಿ ಹಾಗಿದ್ದರೆ ಮಂಗಳವಾರ ಅರ್ಜಿ ವಿಚಾರಣೆ ನಡೆಸೋಣ ಎಂದು ಮುಂದೂಡಿದರು.



Join Whatsapp