ಜುಲೈ 21ರಂದು ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿಗೆ ಇಡಿ ಸಮನ್ಸ್

Prasthutha|

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಜುಲೈ 21ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇ.ಡಿ) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಸಮನ್ಸ್ ಜಾರಿ ಮಾಡಿದೆ.

- Advertisement -

 ಇ.ಡಿ.ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ ಅವರಿಗೆ ಜೂನ್ 23 ರಂದು ಎರಡನೇ ಸಮನ್ಸ್ ನೀಡಲಾಗಿತ್ತು. ಆದರೆ ಕೋವಿಡ್ ಮತ್ತು ಶ್ವಾಸಕೋಶದ ಸೋಂಕಿನ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಅವರು ವಿಶ್ರಾಂತಿಯ ಪಡೆಯಬೇಕಾದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿರಲಿಲ್ಲ.

 ಜೂನ್ 23ರ ಸಮನ್ಸ್ ಅನ್ನು ನಾಲ್ಕು ವಾರಗಳ ಕಾಲ ಮುಂದೂಡುವಂತೆ ಗಾಂಧಿ ಇ.ಡಿಯನ್ನು ಕೋರಿದ್ದರು. ಜುಲೈ 21 ರಂದು ತನಿಖೆಗೆ ಹಾಜರಾಗುವುದಾಗಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಇಡಿ ಸಮನ್ಸ್ ಜಾರಿ ಮಾಡಿದೆ.



Join Whatsapp