ಮುಸ್ಲಿಮ್ ಬಾಲಕನ ಹೃದಯ ಬಡಿತಕ್ಕೆ ಚಾಲನೆ ನೀಡಿದ ಹಿಂದೂ ಬಾಲಕಿ..!

Prasthutha|

ಬೆಳಗಾವಿ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯವಾದ ಬಾಲಕಿಯ ಅಂಗಾಂಗ ದಾನ ಮಾಡಲು ಪೋಷಕರು ನಿರ್ಧರಿಸಿದ್ದಾರೆ. ಅದರಂತೆ 22 ವರ್ಷದ ಯುವಕನಿಗೆ ಬಾಲಕಿಯ ಹೃದಯ ಕಸಿ ಮಾಡಲು ವೈದ್ಯರು ಸಿದ್ಧತೆ ನಡೆಸಿದ್ದಾರೆ.

- Advertisement -

ಉತ್ತರ ಕನ್ನಡ‌ ಜಿಲ್ಲೆಯ 15 ವರ್ಷದ ಹಿಂದೂ ಬಾಲಕಿಯನ್ನು ಧಾರವಾಡದ ಎಸ್‌ ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕಿಯ ಮೆದುಳು ನಿಷ್ಕ್ರಿಯವಾದ ಹಿನ್ನೆಲೆಯಲ್ಲಿ ಅಂಗಾಂಗ ದಾನಕ್ಕೆ ಪೋಷಕರು ನಿರ್ಧರಿಸಿದ್ದರು. ಬೆಳಗಾವಿಯ ಕೆಎಲ್​​​​ ಇ ಆಸ್ಪತ್ರೆಯಲ್ಲಿ ಮುಸ್ಲಿಮ್ ಯುವಕನೊಬ್ಬ ಹೃದ್ರೋಗದಿಂದ ಬಳಲುತ್ತಿದ್ದು, ಆ ಯುವಕನಿಗೆ ಜೋಡಿಸಲು ಬಾಲಕಿಯ ಹೃದಯವನ್ನು ರವಾನಿಸಲಾಗಿದೆ.



Join Whatsapp