ಬೆಂಗಳೂರು:ಬ್ರಹ್ಮಶ್ರೀ ನಾರಾಯಣ ಗುರು ಅವರ ಪಠ್ಯವನ್ನು ಸಮಾಜ – ವಿಜ್ಞಾನ ಪಠ್ಯದಲ್ಲಿ ತಕ್ಷಣ ಅಳವಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಆದೇಶ ನೀಡಿದ್ದಾರೆ.
ಈ ಹಿಂದೆ ಬ್ರಹ್ಮಶ್ರೀ ನಾರಾಯಣ ಗುರು ಅವರ ಪಠ್ಯವನ್ನು ಸಮಾಜ – ವಿಜ್ಞಾನ ಪಠ್ಯದಿಂದ ಕೈಬಿಟ್ಟು ಕೇವಲ ಕನ್ನಡ ಭಾಷೆಯಲ್ಲಿ ಅಳವಡಿಸಲಾಗಿದ್ದು, ಇದರಿಂದ ಆಕೋಶಗೊಂಡ ಕರಾವಳಿ ಭಾಗದ ಪ್ರಬಲ ಬಿಲ್ಲವ ಸಮುದಾಯ ರಾಜ್ಯ ಸರ್ಕಾರದ ವಿರುದ್ಧ ಬಹಿರಂಗ ಸಮರ ಘೋಷಿಸಿತ್ತು.
ಈ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಮತ್ತು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಅವರನ್ನು ಭೇಟಿಯಾಗಿ ಬ್ರಹ್ಮಶ್ರೀ ನಾರಾಯಣ ಗುರು ಅವರ ಪಠ್ಯವನ್ನು ಸಮಾಜ – ವಿಜ್ಞಾನ ಪಠ್ಯದಲ್ಲಿ ಸೇರಿಸುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸದ್ಯ ಬ್ರಹ್ಮಶ್ರೀ ನಾರಾಯಣ ಗುರು ಅವರ ಪಠ್ಯವನ್ನು ಸಮಾಜ – ವಿಜ್ಞಾನ ಪಠ್ಯದಲ್ಲಿ ಸೇರಿಸಲು ಸಚಿವ ಬಿ.ಸಿ. ನಾಗೇಶ್ ಮಹತ್ವದ ಆದೇಶದ ನೀಡಿದ್ದಾರೆ.