ಎಲ್ಲಾ ನಿಗಮ, ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರ ನಾಮನಿರ್ದೇಶನ ರದ್ದು

Prasthutha|

ಬೆಂಗಳೂರು: ರಾಜ್ಯಮಟ್ಟದ ಎಲ್ಲಾ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷ- ಉಪಾಧ್ಯಕ್ಷರ ನಾಮನಿರ್ದೇಶನವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರದ್ದುಗೊಳಿಸಿದ್ದಾರೆ.

- Advertisement -

ಚುನಾವಣೆಗೆ 10 ತಿಂಗಳು ಬಾಕಿ ಇರುವಾಗ ಪಕ್ಷದ ಶಾಸಕರು ಮತ್ತು ಕಾರ್ಯಕರ್ತರಿಗೆ ನಿಮಗ ಮಂಡಳಿಗಳಲ್ಲಿ ಆದ್ಯತೆ ನೀಡಲು ಈ ನಿರ್ಧಾರ ಕೈಗೊಳ್ಳಲಾಗಿದೆ.

ಭಾನುವಾರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.



Join Whatsapp