ಬ್ರಹ್ಮಶ್ರೀ ನಾರಾಯಣ ಗುರು ಪಠ್ಯವನ್ನು ಸಮಾಜ ವಿಜ್ಞಾನಕ್ಕೆ ಅಳವಡಿಕೆ: ಶಿಕ್ಷಣ ಇಲಾಖೆಯಿಂದ ಅಧಿಕೃತ ಆದೇಶ

Prasthutha|

ಬೆಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು ಅವರ ಪಠ್ಯವನ್ನು ಸಮಾಜ ವಿಜ್ಞಾನ ಪಠ್ಯದಲ್ಲಿ ಅಳವಡಿಸಲು ಮಂಗಳವಾರ ಶಿಕ್ಷಣ ಇಲಾಖೆ ಆದೇಶ ನೀಡಿದೆ.

- Advertisement -


ಈ ಹಿಂದೆ ಬ್ರಹ್ಮಶ್ರೀ ನಾರಾಯಣ ಗುರು ಅವರ ಪಠ್ಯವನ್ನು ಸಮಾಜ ವಿಜ್ಞಾನ ಪಠ್ಯದಿಂದ ಕೈಬಿಟ್ಟು ಕೇವಲ ಕನ್ನಡ ಭಾಷೆಯಲ್ಲಿ ಅಳವಡಿಸಲಾಗಿತ್ತು. ಇದರಿಂದ ಆಕೋಶಗೊಂಡ ಕರಾವಳಿ ಭಾಗದ ಪ್ರಬಲ ಬಿಲ್ಲವ ಸಮುದಾಯ ರಾಜ್ಯ ಸರ್ಕಾರದ ವಿರುದ್ಧ ಬಹಿರಂಗ ಸಮರ ಘೋಷಿಸಿತ್ತು.


ಈ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಅವರನ್ನು ಭೇಟಿಯಾಗಿ ಬ್ರಹ್ಮಶ್ರೀ ನಾರಾಯಣ ಗುರು ಅವರ ಪಠ್ಯವನ್ನು ಸಮಾಜ ವಿಜ್ಞಾನ ಪಠ್ಯದಲ್ಲಿ ಸೇರಿಸುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಅವರ ಪಠ್ಯವನ್ನು ಸಮಾಜ ವಿಜ್ಞಾನ ಪಠ್ಯದಲ್ಲಿ ಸೇರಿಸಲು ಸಚಿವ ಬಿ.ಸಿ. ನಾಗೇಶ್ ಮಹತ್ವದ ಆದೇಶ ನೀಡಿದ್ದರು. ಆದರೆ ಇಂದು ಶಿಕ್ಷಣ ಇಲಾಖೆ ಸಮಾಜ ವಿಜ್ಞಾನ ವಿಷಯದ ಪಠ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ಅಳವಡಿಸಲು ಅಧಿಕೃತವಾಗಿ ಆದೇಶ ನೀಡಿದೆ.



Join Whatsapp