ಕೊಡಗು: ಜಿಲ್ಲೆಯಲ್ಲಿ ಸತತವಾಗಿ ಕಳೆದ ಎರಡು ವಾರಗಳಿಂದ ಸುರಿದ ಮಹಾಮಳೆಯಿಂದ ಉಂಟಾದ ಹಾನಿಯ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಡಿಕೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿದ ಮುಖ್ಯಮಂತ್ರಿಗಳು ಮಳೆಯಿಂದಾದ ನಷ್ಟದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್, ಕಂದಾಯ ಸಚಿವ ಆರ್.ಅಶೋಕ್, ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಇತರರು ಇದ್ದರು.