ನಿಗಮ, ಮಂಡಳಿಯ ನಾಮನಿರ್ದೇಶನ ರದ್ದು: ಅಧಿಕಾರ ಕಳೆದುಕೊಂಡ ಕರಾವಳಿಯ ಐವರು ಬಿಜೆಪಿ ನಾಯಕರು

Prasthutha|

ಬೆಂಗಳೂರು: ರಾಜ್ಯಮಟ್ಟದ 52 ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷ- ಉಪಾಧ್ಯಕ್ಷರ ನಾಮನಿರ್ದೇಶನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ರದ್ದುಗೊಳಿಸಲಾಗಿದ್ದು, ಕರಾವಳಿಯ ಐವರು ಬಿಜೆಪಿ ನಾಯಕರು ಅಧಿಕಾರ ಕಳೆದುಕೊಂಡಿದ್ದಾರೆ.

- Advertisement -


ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಮಣಿರಾಜ ಶೆಟ್ಟಿ, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅನಂತ ಆಶೀಸರ, ಮೈಸೂರು ಇಲೆಕ್ಟ್ರಿಕಲ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಮೀನುಗಾರಿಕಾ ಅಭಿವೃದ್ಧಿ ನಿಗಮದ ನಿತಿನ್ ಕುಮಾರ್ ಅವರ ಸ್ಥಾನ ಕಳೆದುಕೊಂಡಿದ್ದಾರೆ.

ಚುನಾವಣೆಗೆ 10 ತಿಂಗಳು ಬಾಕಿ ಇರುವಾಗ ಪಕ್ಷದ ಶಾಸಕರು ಮತ್ತು ಕಾರ್ಯಕರ್ತರಿಗೆ ನಿಗಮ ಮಂಡಳಿಗಳಲ್ಲಿ ಆದ್ಯತೆ ನೀಡಲು ಈ ನಿರ್ಧಾರ ಕೈಗೊಳ್ಳಲಾಗಿದೆ.
ಭಾನುವಾರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.



Join Whatsapp