ಮಂಗಳೂರು: ಹತ್ತಿರದ ಉಳ್ಳಾಲದ ಬಟ್ಟಪಾಡೆ ಕಡಲ ತೀರದಲ್ಲಿ ಎದುರಾಗಿರುವ ಕಡಲ್ಕೊರೆತದ ಸ್ಥಿತಿಗತಿಗಳನ್ನು ಜು.12ರ ಮಂಗಳವಾರ ಮುಖ್ಯಮಂತ್ರಿಗಳಾದ ಬಸವರಾಜ ಎಸ್ ಬೊಮ್ಮಾಯಿಯವರು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಕಂದಾಯ ಸಚಿವರಾದ ಆರ್. ಅಶೋಕ್, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಶಾಸಕರಾದ ಯು.ಟಿ.ಖಾದರ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಸೇರಿದಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಹಾಜರಿದ್ದರು.