ಪಿಎಸ್ಐ ನೇಮಕಾತಿ ಅಕ್ರಮ: ಅಮೃತ್ ಪೌಲ್ ಮತ್ತೆ 3 ದಿನ ಸಿಐಡಿ ವಶಕ್ಕೆ

Prasthutha|

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ಮಾಜಿ ಎಡಿಜಿಪಿ ಅಮೃತ್ ಪೌಲ್ ರನ್ನು ನ್ಯಾಯಾಲಯ ಮತ್ತೆ ಮೂರು ದಿನಗಳ ಕಾಲ ಸಿಐಡಿ ವಶಕ್ಕೆ ಒಪ್ಪಿಸಿದೆ.

- Advertisement -

ಪೊಲೀಸ್ ನೇಮಕಾತಿ ವಿಭಾಗದ ಎಜಿಡಿಪಿಯಾಗಿದ್ದ ಅಮೃತ್ ಪೌಲ್ ರ ಸಿಐಡಿ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಪೌಲ್ ರನ್ನು 1ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲಯ ಅವರನ್ನು ಮತ್ತೆ ಮೂರು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿದೆ.



Join Whatsapp