ಬೆಂಗಳೂರು: ಪಿಯುಸಿ ಮತ್ತು ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ನೀಡುವ ಪ್ರಸ್ತಾವನೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಒಪ್ಪಿಗೆ ಸೂಚಿಸಿದ್ದಾರೆ.
ಈ ಕುರಿತು ಶೀಘ್ರದಲ್ಲೇ ಯೋಜನೆಗೆ ಟೆಂಡರ್ ಕರೆಯಲಾಗುವುದು ಎಂದು ಪಾಲಿಕೆ ವಿಶೇಷ ಆಯುಕ್ತ ರಾಮಪ್ರಸಾತ್ ಮನೋಹರ್ ಅವರು ಪ್ರಕಟನೆಯಲ್ಲಿ ತಿಳಿಸಿದರು.
“ ಆರಂಭದಲ್ಲಿ ನಾವು 5,000 ಲ್ಯಾಪ್ ಟಾಪ್ ಗಳನ್ನು ವಿತರಿಸುತ್ತೇವೆ. ಹೆಚ್ಚಿನ ವಿದ್ಯಾರ್ಥಿಗಳಿಗೆ ನಂತರ ನೀಡಲಾಗುವುದು ಎಂದು ಅವರು ಹೇಳಿದರು.
ಪಾಲಿಕೆಯ ಅಧೀನದಲ್ಲಿರುವ SC/ST, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಾಗಿರುತ್ತಾರೆ ಎಂದು ಅವರು ಮಾಹಿತಿ ನೀಡಿದರು.