16ರಂದು ಪಂಜ ಗ್ರಾಮದಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಗ್ರಾಮ ವಾಸ್ತವ್ಯ

Prasthutha|

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಇದೇ ಜು.16ರ ಮೂರನೇ ಶನಿವಾರ ಮುಲ್ಕಿ ತಾಲೂಕಿನ ಪಂಜ ಗ್ರಾಮದ ವಿಠೋಭ ಭಜನಾ ಮಂದಿರದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

- Advertisement -

ಈ ಹಿನ್ನೆಲೆಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಪ್ರತಿಯೊಂದು ಸರ್ವೇ ಮಾಡಿಸಿ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಸ್ವೀಕರಿಸುವಂತೆ ಸೂಚಿಸಲಾಗಿದೆ. ಆದಾಗ್ಯೂ ಸಾರ್ವಜನಿಕರು ನೇರವಾಗಿ ತಮ್ಮ ಅಹವಾಲುಗಳನ್ನು ನೀಡಲು ಬಯಸಿದ್ದಲ್ಲಿ ಪಂಜ ಗ್ರಾಮ ಪಂಚಾಯತ್‍ ಗೆ ನೀಡಬಹುದಾಗಿದೆ.

ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಜತೆಯಲ್ಲಿದ್ದು, ಸಮಸ್ಯೆಗಳನ್ನು ಆದಷ್ಟು ಸ್ಥಳದಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಯಾವುದೇ ಸಮಸ್ಯೆ ಸ್ಥಳದಲ್ಲಿ ಬಗೆಹರೆಯದಿದ್ದಲ್ಲಿ ಮುಂದಿನ ಸೂಕ್ತವಾದ ದಿನವನ್ನು ನಿರ್ಧರಿಸಿ ಅದೇ ಗ್ರಾಮದಲ್ಲಿಯೇ ಮತ್ತೊಮ್ಮೆ ಗ್ರಾಮ ವಾಸ್ತವ್ಯ ನಡೆಸಲು ನಿರ್ಧರಿಸಲಾಗುವುದು. ಈ ಸಮಯದಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ಸಮುಚಿತ ವರ್ತನೆಗಳನ್ನು ಪಾಲನೆ ಮಾಡುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Join Whatsapp