ಮಾನವ ಕಳ್ಳ ಸಾಗಣಿಕೆ: ಪಂಜಾಬಿ ಗಾಯಕನಿಗೆ 2 ವರ್ಷ ಜೈಲು ಶಿಕ್ಷೆ!

Prasthutha|

ಚಂದೀಗಡ್: ಪಂಜಾಬಿ ಗಾಯಕ ದಲೇರ್ ಮೆಹಂದಿಗೆ ಪಟಿಯಾಲ ನ್ಯಾಯಾಲಯವು ಮಾನವ ಕಳ್ಳ ಸಾಗಣಿಕೆ ಪ್ರಕರಣದಲ್ಲಿ ಇಂದು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

- Advertisement -

ಮಾನವ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ದಲೇರ್ ಮೆಹಂದಿ ದೋಷಿ ಎಂದು ಸಾಬೀತಾಗಿದ್ದು, ನ್ಯಾಯಾಲಯ ಈ ಶಿಕ್ಷೆ ವಿಧಿಸಿದೆ. 2003ರಲ್ಲಿ ದಲೇರ್ ಮೆಹಂದಿ ಮತ್ತು ಆತನ ಸಹೋದರ ಶಂಶೇರ್ ಸಿಂಗ್ ವಿರುದ್ಧ ಒಟ್ಟು 31 ಪ್ರಕರಣಗಳು ದಾಖಲಾಗಿತ್ತು. ಇಂದು ಈ ಪ್ರಕರಣದ ತೀರ್ಪು ನೀಡಿದ ನ್ಯಾಯಾಲಯ ಗಾಯಕನನ್ನು ಜೈಲಿಗೆ ತಳ್ಳಿದೆ.



Join Whatsapp