ಹೊಸದಿಲ್ಲಿ: ಎನ್ಡಿಎ ಮೈತ್ರಿಕೂಟದ ಪ್ರಮುಖ ಪಕ್ಷವಾಗಿರುವ ಬಿಜೆಪಿಯು ಪಕ್ಷದ ಸಂಸದೀಯ ಸಭೆಯ ಬಳಿಕ ಉಪರಾಷ್ಟ್ರಪತಿ ಚುನಾವಣೆಗೆ ತನ್ನ ಅಭ್ಯರ್ಥಿ ಹೆಸರನ್ನು ಇಂದು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಯನ್ನೊಳಗೊಂಡ ಪಕ್ಷದ ಸಂಸದೀಯ ಸಭೆಯಲ್ಲಿ ಉಪರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಿ ದ ಬಳಿಕ ಮೈತ್ರಿ ಪಕ್ಷಗಳಿಗೆ ತನ್ನ ಅಭ್ಯರ್ಥಿಯ ಹೆಸರನ್ನು ತಿಳಿಸಬಹುದು ಎನ್ನಲಾಗಿದೆ.
ಬಿಜೆಪಿ, ಉಪರಾಷ್ಟ್ರಪತಿ ಚುನಾವಣೆಯಲ್ಲಿ ತನ್ನ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಇತರ ಪಕ್ಷಗಳಿಗೂ ವಿನಂತಿಸಿಕೊಳ್ಳುವ ಸಾಧ್ಯತೆ ಇದ್ದು, ವಿರೋಧ ಪಕ್ಷಗಳು ರಾಷ್ಟ್ರಪತಿ ಚುನಾವಣೆಗೆ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಿದಂತೆ ಉಪರಾಷ್ಟ್ರಪತಿ ಚುನಾವಣೆಗೂ ಅಭ್ಯರ್ಥಿಯನ್ನು ಘೋಷಿಸುವ ಸಂಭವವಿದೆ ಎನ್ನಲಾಗಿದೆ.
ಉಪರಾಷ್ಟ್ರಪತಿ ಚುನಾವಣೆ ಸ್ಪರ್ಧೆಗೆ ನಾಮಪತ್ರ ಸಲ್ಲಿ ಸಲು ಜುಲೈ 19 ಕೊನೆಯ ದಿನವಾಗಿದ್ದು, ಆಗಸ್ಟ್ 6ಕ್ಕೆ ಚುನಾವಣೆ ನಡೆಯಲಿದೆ.